‘ಬೆಂಗಳೂರು: ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಬೂಟಾಟಿಕೆ ಎಂದಿರುವ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೊತ್ತೂರು ಮಂಜುನಾಥ್ ವಿರುದ್ದ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಆಪರೇಷನ್ ಸಿಂಧೂರ್ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ್ಯ ಓಂ ಶಕ್ತಿ ಚಲಪತಿ ಹಾಗೂ ಇತರ ನಾಯಕರು ಕಾಂಗ್ರೆಸ್ ಶಾಸಕನ ಎಸ್ಪಿ ಕಚೇರಿಗೆ ತೆರಳಿ, ದೂರು ಸಲ್ಲಿಸಿದ್ದಾರೆ.