ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕೆ ಬರದಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಗದಗ್‌ನಲ್ಲಿ ಇಂದಿನಿಂದಲೇ ಸಂಪೂರ್ಣ ಲಾಕ್‌ಡೌನ್ ಜಾರಿ. ವೈದ್ಯಕೀಯ ಚಟುವಟಿಕೆ, ಹಾಲು ಸಹಿತ ಅತ್ಯಗತ್ಯ ವಸ್ತುಗಳಿಗಷ್ಟೇ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹೊಟೇಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್ ವಹಿವಾಟಿಗೂ ನಿರ್ಬಂಧವಿದೆ.
ಕೋಲಾರದಲ್ಲಿ ಇಂದಿನಿಂದ 4 ದಿನ ಸಂಪೂರ್ಣ ಲಾಕ್‌ಡೌನ್ ಜಾರಿ ಗೊಳಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಜೂನ್ 7ರ ವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ಚಿತ್ರದುರ್ಗದಲ್ಲಿ 12 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ದಿನ ಬಿಟ್ಟು ದಿನ ಅವಕಾಶ ಕಲ್ಪಿಸಲಾಗಿದೆ.
ಕಲಬುರಗಿಯಲ್ಲೂ ಜನ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದ್ದು ಪಾರ್ಸೆಲ್ ಪಡೆಯಲೂ ಅವಕಾಶ ಇಲ್ಲ. ಅನಗತ್ಯ ವಾಹನ ಸಂಚಾರಕ್ಜೂ ಬ್ರೇಕ್ ಹಾಕಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತುರ್ತು ಸೇವೆ ಹೊರತು ಪಡಿಸಿ ಉಳಿದೆಲ್ಲವೂ ಸ್ತಬ್ಧ.
ಮೈಸೂರಿನಲ್ಲಿ ಕೋವಿಡ್ 19 ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮೇ 29ರಿಂದ ಜೂನ್ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡುವ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. ವಾರದಲ್ಲಿ 2 ದಿನ ಅಗತ್ಯ ವಸ್ತುಗಳಿಗೆ ಅವಕಾಶ ನೀಡಿದ್ದನ್ನು ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ಹೇಳಿದೆ.
ಕೊಪ್ಪಳ ಜಿಲ್ಲೆಯೂ ಸಂಪೂರ್ಣ ಲಾಕ್. ನಾಲ್ಕು ದಿನ ಅತ್ಯಗತ್ಯ ಸೇವೆಗಳಿಗಷ್ಟೇ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.