ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಗನನ್ನು ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ವಿರುದ್ಧ ಕಾಂಗೇಸ್ ನಾಯಕರು ಮಾಡುತ್ತಿರುವ ಟೀಕೆ ಹಾಗೂ ತಮ್ಮ ಸಹೋದರ ಬಂಧನವಾಗಿರುವ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಾಪ ಸಿಂಹ ‘ನನ್ನ ಮುಗಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಕೊನೆಗೆ ನನ್ನ ಜೀವನ ತೆಗೆಯಬಹುದು ಅಷ್ಟೇ’ ಎಂದು ಭಾವುಕರಾಗಿ ನುಡಿದಿದ್ದಾರೆ.
ಆರೂವರೆ ಕೋಟಿ ಚೆಕ್ ಬೌನ್ಸ್ ಮಾಡಿದ್ದು, ಕೋರ್ಟ್ ನಿಂದ 6 ತಿಂಗಳು ಜೈಲು ವಾಸಕ್ಕೆ ಒಳಗಾಗಿದ್ದು ಮಧು ಬಂಗಾರಪ್ಪ, ಆದರೆ ಅರೆಸ್ಟ್ ಮಾಡಿದ್ದು ಪ್ರತಾಪ್ ಸಿಂಹನ ಸಹೋದರನ. ನಿಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ, ನಿಮ್ಮ ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್? pic.twitter.com/jAa566nGom
— Pratap Simha (Modi Ka Parivar) (@mepratap) December 31, 2023
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ ಪ್ರತಾಪ ಸಿಂಹ, ‘ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ಮಗನನ್ನ ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್ಐಆರ್ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ, ನನ್ನ ತೇಜೋವಧೆ ಮಾಡಿದ್ದಾಯಿತು. ಈಗ ನನ್ನ ಕುಟುಂಬವನ್ನ ಮುಗಿಸಲು ಪ್ರಯತ್ನ ಮಾಡುತ್ತಿದ್ದೀರಿ ಎಂದು ‘ ಎಂದು ಆಕ್ರೋಶ ಹೊರಹಾಕಿದರು.
ತನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಯಾರನ್ನ ಬೇಕಾದರೂ ತುಳಿಯುತ್ತಾರೆ. ಇದನ್ನ ಸಿದ್ದರಾಮಯ್ಯ ಅವರಿಂದ ಕಲಿಯಬೇಕು ಎಂದು ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ, ಬೆಳಗಾವಿಯಲ್ಲಿ ಹಿಂದುಳಿದ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಬಗ್ಗೆ ವಿಷಯಾಂತರ ಮಾಡಲು . ನನ್ನ ವಿಷ್ಯ ಇಟ್ಟುಕೊಂಡು ಆ ವಿಚಾರವನ್ನು ಮುಂದಿಟ್ಟಿದ್ದಾರೆ ಎಂದು ಆರೋಪಿಸಿದರು.






















































