ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರು ಮತದಾರರಿಗೆ ಹಣದ ಆಮಿಷ ಒಡ್ಡಿದ್ದಾರೆಂದು ಆರೊಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಣ ಹಂಚಿರುವ ಆರೋಪ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಇಲ್ಲಿಂದ ಗಡಿಪಾರು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರ ಗಳು ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ್, ಕೃಷ್ಣ ಬೈರೇಗೌಡ, ಎಚ್.ಆಂಜನೇಯ, ಎಚ್ಎಂ ರೇವಣ್ಣ, ರಿಜ್ವಾನ್ ಅರ್ಷದ್, ಬಸವರಾಜ ರಾಯರೆಡ್ಡಿ ಶಿವರಾಜ್ ತಂಗಡಗಿ, ಬೋಸರಾಜ್ ಸಹಿತ ಅನೇಕ ಮುಖಂಡರು ಪಾಲ್ಗೊಂಡಿದ್ದರು. ತಪ್ಪಿತಸ್ಥರ ವಿರುದ್ದ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.