ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಮುಖ್ಯಮಂತ್ರಿ ವಿರುದ್ದ ಸ್ವಪಕ್ಷೀಯ ನಾಯಕರೇ ಸಿಡಿದೆದ್ದಂತಿದೆ. ಬಿ.ಕೆ.ಹರಿಪ್ರಸಾದ್ ಅವರು ಆಕ್ರೋಶ ಹೊರಹಾಕಿರುವ ವೀಡಿಯೋವೊಂದು ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ‘ನನಗೆ ಸಿಎಂ ಆಗಿ ಮಾಡೋದು ಗೊತ್ತು ಇಳಿಸೋದು ಗೊತ್ತು’ ಎಂದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಲ್ಲವ, ಈಡಿಗ ಮುಖಂಡರ ಸಭೆಯಲ್ಲಿ ಹರಿಪ್ರಸಾದ್ ಅವರು ಈ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2013ರಲ್ಲಿ ಸಿದ್ದರಾಮಯ್ಯ ವರಿಗೆ ಸಿಎಂ ಆಗಲು ಬೆಂಬಲ ನೀಡಿದೇವು. ‘ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ ‘ ಎಂದೂ ಅವರು ಈ ಸಭೆಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.
https://twitter.com/FollowAkshay1/status/1682645563173470208?t=wddSpsHIwyV4eI9N96-sww&s=19



















































