ಬೆಂಗಳೂರು: ಪೆಟ್ರೋಲ್-ಡೀಸೆಲ್ ದರ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ.
ಪೆಟ್ರೋಲ್ ಡಿಸೀಲ್ ಮೇಲೆ ಸೆಸ್ ವಿಧಿಸುವ ಮೂಲಕ ರಾಜ್ಯ ಸರ್ಕಾರ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ
ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ ಎಂದು ಸಿ.ಟಿ.ರವಿ ಸಾಮಾಜಿಕ ಜಾಲತಾಣ’X’ನಲ್ಲಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಿಸಿದ @INCIndia ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @siddaramaiah ಹಾಗು ಸನ್ಮಾನ್ಯ ಉಪಮುಖ್ಯಮಂತ್ರಿಯವರಾದ ಶ್ರೀ @DKShivakumar ಅವರು. pic.twitter.com/si1tYnrWPF
— C T Ravi 🇮🇳 ಸಿ ಟಿ ರವಿ (@CTRavi_BJP) June 15, 2024
ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಸರಾಸರಿ ಮೂರೂ ರೂಪಾಯಿ ಹಾಗು ಡಿಸೇಲ್ ಬೆಲೆ ಸರಾಸರಿ ಮೂರುವರೆ ರೂಪಾಯಿಯಷ್ಟು ಜಾಸ್ತಿ ಮಾಡಿದೆ.
“ನಾನು ಬಡವರ ಪರ” ಎಂದು ಬೊಬ್ಬೆ ಹೊಡೆಯುವ ಮುಖ್ಯಮಂತ್ರಿಯವರೇ ಇದೆ ಏನು ನಿಮ್ಮ ಬಡವರ ಪರ ನೀತಿ? ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
“ಪೆಟ್ರೋಲ್ ಡಿಸೀಲ್ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ”
ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ.
1/2 pic.twitter.com/2g9odFWrjp
— C T Ravi 🇮🇳 ಸಿ ಟಿ ರವಿ (@CTRavi_BJP) June 15, 2024





































































