ಬೆಂಗಳೂರು: ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಿಂದ ಕಾಂಗ್ರೆಸ್ ನಾಯಕರು ದೂರ ಉಳಿಯಲು ನಿರ್ಧರಿಸಿದ್ದು, ಎಐಸಿಸಿ ನಾಯಕರ ನಡೆಗೆ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ.
ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಜನಪ್ರತಿನಿಧಿಯಾಗಿ ಇಲ್ಲಿಯ ವರೆಗೆ ನೂರಾರು ದೇವಸ್ಥಾನಗಳ ಪ್ರತಿಷ್ಠಾಪನೆ, ಜೀರ್ಣೋದ್ದಾರದಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಊರಿನಲ್ಲಿಯೇ ರಾಮನ ದೇವಸ್ಥಾನವನ್ನು ನಿರ್ಮಾಣ ಮಾಡಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ್ದೇನೆ. ಇದೇ ರೀತಿ ಮಸೀದಿ-ಚರ್ಚ್ ಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ಸಲ್ಲಿಸಿದ್ದೇನೆ.…
— Siddaramaiah (@siddaramaiah) January 11, 2024




















































