ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಆರಂಭಿಸಿರುವ ಕಾಂಗ್ರೆಸ್ ನಾಯಕರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ರಣಕಹಳೆ ಮೊಳಗಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಆರಂಭಗೊಂಡ ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಶಾಸಕರು, ಸಂಸದರು, ಕಾಂಗ್ರೆಸ್ ನಾಯಕರನೇಕರು ಭಾಗಿಯಾಗಿದ್ದಾರೆ.
ಬೆಳಿಗ್ಗೆ ಪಾದಯಾತ್ರೆ ಆರಂಭಕ್ಕೂ ಮುನ್ನ ಕಾಮಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸಂಸದ ಡಿ.ಕೆ.ಸುರೇಶ್ ಸಹಿತ ನಾಯಕರು ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ಚಳುವಳಿ ಆರಂಭಿಸಿರುವ ಕಾಂಗ್ರೆಸ್ ಧುರೀಣರಿಗೆ 20 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ.