ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವು ರಾಜ್ಯಾದ್ಯಂತ ಪ್ರತಿಯೊಂದು ಬೂತ್ ಮಟ್ಟದಲ್ಲಿ ಏಕಕಾಲಕ್ಕೆ ಶನಿವಾರ ಬೆಳಗ್ಗೆ 11 ಗಂಟೆಗೆ ಚಾಲನೆ ಪಡೆಯಲಿದೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಬೆಳಗ್ಗೆ 11.00 ಗಂಟೆಗೆ ಈ ಸದಸ್ಯತ್ವ ನೊಂದಣಿಗೆ ಜೂಮ್ ವಿಡಿಯೋ ಸಂವಾದದ ಮೂಲಕ ಚಾಲನೆ ನೀಡಿ, ವೀಕ್ಷಿಸಲಿದ್ದಾರೆ.
ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಮುಖ್ಯಸ್ಥರಾದ ಮಧುಸೂಧನ್ ಮಿಸ್ತ್ರಿ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಮೈಸೂರಿನಿಂದ ವಿಧಾನಸಭೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ ಸುಮಾರು 2000 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯುವ ಈ ಅಭಿಯಾನದಲ್ಲಿ ಆಯಾ ಭಾಗದ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಪ್ರಕಟಣೆ ತಿಳಿಸಿದೆ.
















































































