ದೆಹಲಿ: ಪ್ರಕರಣವೊಂದರಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಅವರ ಹಾಜರಾತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನಾ ಸಂದರ್ಭದಲ್ಲಿ ಕೈ ನಾಯಕರು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು. ಹೋರಾಟವೊಂದರಲ್ಲಿ, ಯಾವುದೇ ಕ್ರಮಕ್ಕೆ ಬಗ್ಗುವುದುಲ್ಲ, ಜಗ್ಗುವುದಿಲ್ಲ ಎಂದು ಹೇಳಿಕೊಳ್ಳುತ್ತಿದ್ದ ನಾಯಕರ ಪೈಕಿ ಒಬ್ಬಾತ ಖಾಕಿ ಹಿಡಿತದಿಂದ ತಪ್ಪಿಸಿ ಕಾಲಿಗೆ ಬುದ್ದಿ ಹೇಳಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವೀಡಿಯೋವನ್ನು ಮುಂದಿಟ್ಟು ಕಾಂಗ್ರೆಸ್ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿರುವ ಬಿಜೆಪಿ, ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು ಎಂದು ವ್ಯಂಗ್ಯವಾಡಿದೆ. ಈ ಕುರಿಂತಂತೆ ಟ್ವೀಟ್ ಮಾಡಿರುವ ಬಿಜೆಪಿ, ಇಡಿ ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಐವೈಸಿ ಅಧ್ಯಕ್ಷರು ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳಿದ್ದಾರೆ. ಪಲಾಯವಾದವೇ ಇವರ ಬಂಡವಾಳ ಎಂದು ಬಣ್ಣಿಸಿದೆ.
ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು.
ಇಡಿ ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಐವೈಸಿ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ.
ಪಲಾಯವಾದವೇ ಇವರ ಬಂಡವಾಳ!
#FakeGandhisBachaoToolKit pic.twitter.com/Gygnt5d5jP
— BJP Karnataka (@BJP4Karnataka) June 13, 2022






































































