ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ದ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್, ಏಪ್ರಿಲ್ 5ರಿಂದ ರಾಜ್ಯದಲ್ಲಿ ಸತ್ಯಮೇವ ಜಯತೆ ಹೋರಾಟ ಆರಂಭಿಸಲಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಏಪ್ರಿಲ್ 5ರಂದು ರಾಹುಲ್ ಗಾಂಧಿ ಅವರು ಅದೇ ಕೋಲಾರಕ್ಕೆ ಬಂದು ಗಾಂಧೀಜಿ ಅವರ ಮೂಲ ಮಂತ್ರವಾದ ಸತ್ಯ ಮೇಯ ಜಯತೆ ಹೋರಾಟವನ್ನು ದೇಶದುದ್ದಗಲಕ್ಕೆ ಆರಂಭಿಸುತ್ತಿದ್ದಾರೆ ಎಂದರು.
ನಾವು ಇಲ್ಲಿಂದಲೇ ಹೋರಾಟ ಆರಂಭಿಸಲು ಮನವಿ ಮಾಡಿದ್ದು, ಅವರು ಇಲ್ಲಿಗೆ ಆಗಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದರೋ ಅದೇ ಭೂಮಿಯಿಂದ ಮತ್ತೆ ಪ್ರಜಾಪ್ರಭುತ್ವ ಉಳಿಸುವ, ರಾಜ್ಯ ಹಾಗೂ ದೇಶದಲ್ಲಿ ಹೊಸ ಬದಲಾವಣೆ ಗಾಳಿ ಬೀಸಲು ಹೋರಾಟ ಮಾಡಲಿದ್ದಾರೆ ಎಂದು ಡಿಕೆಶಿ ತಿಳಿಸಿದರು.
ಬಿಜೆಪಿಯ ಅಧಿಕಾರ ದುರ್ಬಳಕೆಯಿ ಪ್ರಜಾಪ್ರಭುತ್ವಕ್ಕೆ ಅಪಮಾನವಾಗಿದೆ. ರಾಹುಲ್ ಗಾಂಧಿ ಅವರು ದೇಶದಾದ್ಯಂತ ಪಾದಯಾತ್ರೆ ಮಾಡಿ ಜನರ ಮನ ಗೆದ್ದಿರುವುದಕ್ಕೆ ಬಿಜೆಪಿಯವರು ಈ ಸ್ಥಿತಿ ತಂದಿದ್ದಾರೆ ಎಂದು ಡಿಕೆಶಿ ಹೇಳಿದರು.




















































