ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಹೈಕಮಾಂಡ್ ತನ್ನ ಪಕ್ಷದ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರು ಸಸಿಕಾಂತ್ ಸೆಂಥಿಲ್ ಅವರ ಹೆಸರು ಈ ಪಟ್ಟಿಯಲ್ಲಿದೆ.
ಉತ್ತರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಅಂಡಮಾನ್-ನಿಕೋಬಾರ್, ಪಶ್ಚಿಮ ಬಂಗಾಳ, ಮಣಿಪುರ, ಜಮ್ಮು-ಕಾಶ್ಮೀರ, ಅಸ್ಸಾಂ, ಮಿಜೋರಾಂನ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗಿದ್ದು 13 ರಾಜ್ಯಗಳ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್ ಅಜಯ್ ರೈ ಅವರಿಗೆ ಟಿಕೆಟ್ ಪ್ರಕಟಿಸಿದೆ. ದಿಗ್ವಿಜಯ್ ಸಿಂಗ್ ಅವರು ಮಧ್ಯಪ್ರದೇಶದ ರಾಜ್ ಗಡ್ನಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕರ್ನಾಟಕದ ನಿವೃತ್ತ ಐಎಎಸ್ ಅಧಿಕಾರಿ ಶಶಿಕಾಂತ್ ಸೇಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.