ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ.
ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಏಪ್ರಿಲ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದೆ.
ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರಿಗೆ ವಿವರ ಒದಗಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಈ ತಿಂಗಳ 17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.