ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಗಮನಸೆಳೆಯಿತು.
ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವ ಕೃಷ್ಣಬೈರೇಗೌಡ, ಶಾಸಕಿ ಸೌಮ್ಯರೆಡ್ಡಿ ಸಹಿತ ಮುಖಂಡರನೇಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೋರಾಟದ ಅಖಾಡಕ್ಕೆ ಧುಮುಕಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಗ್ಯಾಸ್ ಸಿಲಿಂಡರ್‌ಗಳ ಮೂಲಕ ನಡೆಸಿದ ಅಣಕು ಪ್ರದರ್ಶನ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಯಿತು. ಡಿಕೆಶಿ ಕೂಡಾ ಆ ಮಹಿಳಾ ಮಣಿಗಳ ನಡುವೆ ಅಡುಗೆ ಅರಮನೆಯ ಸನ್ನಿವೇಶ ಸೃಷ್ಟಿಸಿ ಅಚ್ಚರಿಯ ಪ್ರಸಂಗಕ್ಕ ಸಾಕ್ಷಿಯಾದರು.