ಮಂಗಳೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಅರ್.ಅಂಬೇಡ್ಕರ್ ಭಾವಚಿತ್ರವನ್ನೂ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ-ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡದ ನಿಯೋಗ ಮನವಿ ಮಾಡಿದೆ.
ಪುತ್ತೂರಿನ ಸ್ವರ ಮಾಧುರ್ಯ ಬಳಗದ ಸಲಹೆಗಾರರಾದ ಜನಾರ್ದನ, ಪತ್ರಕರ್ತ ಸಿ.ಶೇ ಕಜೇಮಾರ್, ಜಿಲ್ಲಾ ದಲಿತ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಬಡಗನ್ನೂರು ಅವರನ್ನೊಳಗೊಂಡ ನಿಯೋಗ ಮನವಿ ಸಲ್ಲಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಜಿಲ್ಲಾ ಅಪರ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಮಂಗಳೂರು ಮಹನಗರಪಾಲಿಕೆ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.