ಬೆಂಗಳೂರು: ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಮಾರ್ಚ್ ೨೮-೨೯ರಂದು ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ. ಭಾರತ ಉಳಿಸಿ – ಜನತೆಯನ್ನು ರಕ್ಷಿಸಿ ಎಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯಂತೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಬೇಕೆಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ರದ್ದು ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು. ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಟ್ಡಡ ನಿರ್ಮಾಣ ಕಲ್ಯಾಣ ಮಂಡಳಿ ಉಳಿಯಬೇಕು, ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು ಹಾಗೂ ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು. ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು ಮತ್ತು ಕರ್ನಾಟಕದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಘೋಷಿಸಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಹಾಗೂ ಕೊವೀಡ್ ಸಮಯದಲ್ಲಿ ಕಲ್ಯಾಣ ಮಂಡಳಿ ನಡೆಸಿರುವ ಎಲ್ಲ ಖರೀದಿಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಇದೇ ಮಾರ್ಚ ೨೮-೨೯ ರಂದು ರಾಜ್ಯದ್ಯಾಂತ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ರಿ) ನೇತೃತ್ವದಲ್ಲಿ ಕೆಲಸವನ್ನು ಸ್ಥಳಿತಗೊಳಿಸಿ ಎರಡು ದಿನಗಳ ಮುಷ್ಕರ ನಡೆಸಲಿದ್ದಾರೆ ಎಂದು ಮಹಂತೇಶ್ ಅವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕೋವಿಡ್-೧೯ ಸಾಂಕ್ರಾಮಿಕರೋಗದ ಮೊದಲೆರಡು ಅಲೆಗಳ ಸಂದರ್ಭದಲ್ಲಿಕೇಂದ್ರ-ರಾಜ್ಯ ಸರ್ಕಾರಗಳು ವಿಧಿಸಿದ ಲಾಕ್ಡೌನ್‌ಗಳು ದುಡಿಯುವಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದ್ದವು. ಎರಡು ಅಲೆಗಳ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ನೀಡಿದಪರಿಹಾರ ಪ್ಯಾಕೇಜ್‌ಗಳು ಬಡಜನರ ಬದುಕಿಗೆ ಆಸರೆಯಾಗಲಿಲ್ಲ. ಬದಲಾಗಿಕಾರ್ಪೊರೇಟ್ ಬಂಡವಾಳಗಾರರ, ಶ್ರೀಮಂತರ ಜೋಬು ತುಂಬಿಸಿದವು. ಕೇಂದ್ರದ ಮೋದಿ ಸರ್ಕಾರ ‘ನವ ಉದಾರೀಕರಣ ನೀತಿ’ಗಳನ್ನು ಅಕ್ರಮಣಕಾರಿಯಾಗಿ ಜಾರಿ ಮಾಡುತ್ತಿದ್ದು, ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ, ಐಸಿಡಿಎಸ್ ಯೋಜನೆ, ಸಾರ್ವಜನಿಕ ಆರೋಗ್ಯ, ಶಿಕ್ಷಣ, ಮತ್ತಿತರ ಕ್ಷೇತ್ರಗಳಿಗೆ ನಿರಂತರ ಬಜೆಟ್‌ನಲ್ಲಿ ಹಣಕಾಸಿನ ಕಡಿತ ಮಾಡಲಾಗುತ್ತಿದೆ. ಇದರಿಂದ ನಿರುದ್ಯೋಗ, ಬಡತನ, ಹಸಿವಿನ ಪ್ರಮಾಣ ನಿರಂತರ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ತೆರಿಗೆ ನೀತಿ, ದಿನ ಬಳಕೆಯ ಸರಕು ಮತ್ತು ಸೇವೆಗಳ ಮೇಲಿನ ಬಾರೀ ಪ್ರಮಾಣದ ಪರೋಕ್ಷ ಜಿ.ಎಸ್.ಟಿ.ಯಂತಹ ಕ್ರಮಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳು ನಿರಂತರ ಹೆಚ್ಚಳಗೊಳ್ಳುತ್ತಲೇ ಇವೆ. ಇವು ಮತ್ತುಕೋವಿಡ್ ಸಂಕಷ್ಟಗಳು ದೇಶದಲ್ಲಿ ಅರ್ಧದಷ್ಟು ಜನರನ್ನು ಬಡತನ, ಹಸಿವಿಗೆ ತಳ್ಳಲ್ಪಟ್ಟಿತು ಮಾತ್ರವಲ್ಲ, ಭಾರತವನ್ನುಜಾಗತಿಕ ಹಸಿವು ಸೂಚ್ಯಾಂಕದಲ್ಲಿ ೧೦೧ನೇ ಸ್ಥಾನಕ್ಕೆ ಇಳಿಸಿದೆ ಎಂದವರು ದೂರಿದ್ದಾರೆ.
ಕೇಂದ್ರ ಸರ್ಕಾರ ಕೋವಿಡ್ ಸಂದರ್ಭವನ್ನೇ ಉಪಯೋಗಿಸಿಕೊಂಡು ಸಂಸದೀಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿಯಾವುದೇಚರ್ಚೆಯಿಲ್ಲದೆ ಪಾರ್ಲಿಮೆಂಟ್‌ನಲ್ಲಿ ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನು ಹಾಗೂ ಅಸ್ತಿತ್ವದಲ್ಲಿದ್ದ ೨೯ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ವಿರೋಧಿಯಾಗಿ ರೂಪಿಸಿತು. ಅಲ್ಲದೆಕಾರ್ಮಿಕ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಿ ರಾಜ್ಯ ಸರ್ಕಾರಗಳ ಮೂಲಕ ಜಾರಿ ಮಾಡಲು ಮುಂದಾಗಿದೆ. ಅದೇ ರೀತಿ ರಾಜ್ಯದ ಬಿಜೆಪಿ ಸರ್ಕಾರ ಕೂಡ ರೈತ-ಕಾರ್ಮಿಕ-ಜನ ವಿರೋಧಿ ಕಾಯ್ದೆಗಳನ್ನು ರೂಪಿಸಿದೆ ಎಂದವರು ಆಕ್ರೋಶ ಹೊರಹಾಕಿದ್ದಾರೆ.
ದೇಶದಲ್ಲಿ ರೈತ ಸಂಘಟನೆಗಳು ಮತ್ತು ಅವುಗಳ ಜಂಟಿ ವೇದಿಕೆ ಕಾರ್ಮಿಕ, ಮತ್ತಿತರ ಸಂಘಟನೆಗಳ ಬೆಂಬಲದೊಂದಿಗೆದೆಹಲಿಯ ಗಡಿಗಳಲ್ಲಿ ನಡೆಸಿದ ಒಂದು ವರ್ಷ ಸುದೀರ್ಘ ಐತಿಹಾಸಿಕ ಹೋರಾಟ ಮತ್ತು ದೇಶಾದ್ಯಂತ ಏಕಕಾಲದಲ್ಲಿ ನಡೆದ ಜಂಟಿ ಪ್ರತಿಭಟನೆಗಳಿಂದಾಗಿ ಕೇಂದ್ರದ ಮೋದಿ ಸರ್ಕಾರ ರೈತರ ಕ್ಷಮೆ ಯಾಚಿಸಿ ಪಾರ್ಲಿಮೆಂಟಿನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆದಿದೆ. ದೇಶದ ಕಟ್ಟಡ ನಿರ್ಮಾಣ ವಲಯವು ೨೦೧೬ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯೀಕರಣ ಬಳಿಕ ಜಾರಿ ಮಾಡಲಾದ ಸರಕು ಸೇವಾ ತೆರಿಗೆ ನೀತಿಯಿಂದಾಗಿ ತೀವ್ರ ಬಿಕ್ಕಟ್ಟಿಗೆ ಸಿಲುಕಿತು. ಇದಾದ ಬಳಿಕ ೨೦೨೦ ಮಾರ್ಚನಲ್ಲಿ ದಾಳಿ ಮಾಡಿದ ಕರೋನಾ ರೋಗವು ಈ ಕ್ಷೇತ್ರವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಇತ್ತೀಚಿಗೆ ನಿರಂತವಾಗಿ ಏರಿಕೆಯಾಗುತ್ತಿರುವ ಡಿಸೇಲ್ ಹಾಗೂ ಪೆಟ್ರೋಲಿಯಂತೈಲ ಬೆಲೆಗಳು ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿ ಲಕ್ಷಾಂತರ ಉದ್ಯೋಗಗಳ ನಾಶಕ್ಕೆ ಕಾರಣವಾಗುತ್ತಿವೆ. ನಮ್ಮ ದೇಶದಲ್ಲಿ ಕೃಷಿಕ್ಷೇತ್ರದ ಬಳಿಕ ಅತಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿರುವ ನಿರ್ಮಾಣ ವಲಯದಲ್ಲಿ ಸುಮಾರು ೧೦ ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಇವರು ಕರೋನಾ ಲಾಕ್ ಡೌನ್ ನಲ್ಲಿ ಅತಿ ಹೆಚ್ಚು ತೊಂದರೆಗೊಳಪಟ್ಟ ಶ್ರಮಜೀವಿಗಳು. ಆದರೆ ಕರೊನ್ನೋತ್ತರ ಕಾಲಘಟ್ಟದಲ್ಲೂ ಅವರ ಸಂಕಷ್ಟಗಳು ದೂರವಾಗಿಲ್ಲ. ಹಾಗಾಗಿ ಕೇಂದ್ರ ಸರ್ಕಾರದರೈತ-ಕಾರ್ಮಿಕ-ಜನ ವಿರೋಧಿ, ಕಾರ್ಪೊರೇಟ್-ಪರ ಮತ್ತು ರಾಷ್ಟಟ್ರ ವಿರೋಧಿ ವಿನಾಶಕಾರಿ ನೀತಿಗಳ ವಿರುದ್ಧ, ಪಾರ್ಲಿಮೆಂಟ್‌ನಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ ಮಂಡಿಸಿರುವ ಖಾಸಗಿ ಮಸೂದೆಯನ್ನುಅಂಗೀಕರಿಸಬೇಕೆಂದು ಒತ್ತಾಯಿಸಿ ಹಾಗೂ ಸಾಂವಿಧಾನಿಕ ಹಕ್ಕುಗಳ, ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಬಂಡವಾಳಗಾರರ ಕಪಿಮುಷ್ಟಿಯಿಂದ ರಾಷ್ಟçವನ್ನು ಉಳಿಸಿ ಜನತೆಯರಕ್ಷಣೆಗಾಗಿಕೇಂದ್ರಕಾರ್ಮಿಕ ಸಂಘಟನೆಗಳು ೨೦೨೨ ಮಾರ್ಚ್ ೨೮-೨೯ ರಂದುಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆಕರೆ ನೀಡಿರುವ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾವು ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಕರ್ನಾಟಕದಲ್ಲಿ ಮಾರ್ಚ್ ೨೮ ರಂದು ಕೆಲಸದ ಸ್ಥಳಗಳಲ್ಲಿ, ಗ್ರಾಮ ಪಂಚಾಯ್ತಿ ಮತ್ತು ತಾಲೂಕು ಕೇಂದ್ರಗಳಲ್ಲಿ ಹಾಗೂ ಮಾರ್ಷ ೨೯ ರಂದು ಇತರೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿ ಕೇಂದ್ರ ಮತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಿದ್ದಾರೆ.ಎಂದು ಮಹಾಂತೇಶ್ ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರ ಅಖಿಲ ಭಾರತ ಬೇಡಿಕೆಗಳು
- ಕಟ್ಟಡ ಉಧ್ಯಮವನ್ನು ರಕ್ಷಿಸಬೇಕು ಹಾಗೂ ವಿದೇಶಿ ನೇರ ಬಂಡವಾಳ ನಿಯಂತ್ರಿಸಬೇಕು.
- ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನು ಹಾಗೂ ಸೆಸ್ ಕಾನೂನು ೧೯೯೬ ಪುನರ್ ಸ್ಥಾಪಿಸಬೇಕು.
- ದೇಶದ್ಯಾಂತ ಕಾನೂನುಬದ್ದವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಯಬೇಕು
- ನಿರಂತರವಾಗಿ ಏರಿಕೆಯಾಗುತ್ತಿರುವ ಕಟ್ಟಡ ಸಾಮಾಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು.
- ಕಟ್ಟಡ ಸಾಮಾಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿ.ಎಸ್.ಟಿ ಕಡಿತಗೊಳಿಸಬೇಕು.
- ಅಂತರ ರಾಜ್ಯ ವಲಸೆ ಕಾರ್ಮಿಕರ ಕಾನೂನು ೧೯೭೯ ರ ಪರಿಣಾಮಕಾರಿ ಜಾರಿ ಮಾಡಬೇಕು.
ಕಾರ್ಮಿಕ ಸಂಘಗಳ ಬೇಡಿಕೆಗಳು
- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯಅಬಕಾರಿತೆರಿಗೆಯನ್ನುಕಡಿಮೆ ಮಾಡಬೇಕು.
- ಆದಾಯತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿಕುಟುಂಬಕ್ಕೂ ಮಾಸಿಕ ರೂ.೭,೫೦೦ ನೇರ ನಗದು ವರ್ಗಾವಣೆ ಮಾಡಬೇಕು ಹಾಗೂ ಪ್ರತಿ ವ್ಯಕ್ತಿಗೂತಲಾ ೧೦ ಕೆಜಿಆಹಾರ ಧಾನ್ಯಗಳನ್ನು ನೀಡಬೇಕು.
- ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
- ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ಸು ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು.
- ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು.
- ಅಸಂಘಟಿತಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆಒದಗಿಸಬೇಕು. ಕೋವಿಡ್ ಲಾಕ್ಡೌನ್ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರಒದಗಿಸಬೇಕು.
- ಗ್ರಾಮೀಣಉದ್ಯೋಗಖಾತ್ರಿಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು ೨೦೦ ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನಅನುದಾನ ಬಜೆಟ್‌ನಲ್ಲಿ ನೀಡಬೇಕು.
- ಕೋವಿಡ್‌ಎದುರಿಸಲು ಕೆಲಸ ಮಾಡುತ್ತಿರುವ ಮುಂಚೂಣಿಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯಒದಗಿಸಬೇಕು.
- ಅಂಗನವಾಡಿ, ಆಶಾ, ಬಿಸಿಯೂಟ ಮತ್ತುಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆಜಾರಿ ಮಾಡಬೇಕು.
- ರಾಷ್ಟ್ರೀಯಆರ್ಥಿಕತೆಯನ್ನು ಪುನರುಜ್ಜೀವನಗೊಲಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತುಇತರೆ ನಿರ್ಣಾಯಕ ಸಾರ್ವಜನಿಕ ಸೇವೆಗಳಿಗೆ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
- ರಾಷ್ಟೀಯ ಪಿಂಚಣಿಯೋಜನೆ (ಎನ್.ಪಿ.ಎಸ್) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಬೇಕು.
- ರೂ.೨೬ ಸಾವಿರ ಸಮಾನ ಕನಿಷ್ಟ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತ್ತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.