ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದರು.
ಪ್ರತಿಭಟನಾ ಮೆರವಣೆಗೆ ಹೊರಟ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ರೇಸ್ ಕೋರ್ಸ್ ರಸ್ತೆಯಲ್ಲಿ ತಡೆದು ಬಂಧಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಗೋವಿಂದರಾಜ್ ಸಹಿತ ಅನೇಕ ಮುಖಂಡರೂ ಬಂಧನಕ್ಕೆ ಒಳಗಾದರು.