ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆಪ್ತರ ಭ್ರಷ್ಟಾಚಾರ ಕಾರಣದಿಂದ ಬೇಸತ್ತು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ಸಾವಿಗೆ ಶರಣಾಗಿರುವ ಪ್ರಕರಣ ಇದೀಗ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಪಟ್ಟುಹಿಡಿದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರನ ಡೆತ್ ನೋಟನ್ನು ಸಾಮಾಜಿಕ ಜಾಲತಾಣ ‘X’ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರು ಕಮಿಷನ್ ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣ ಬೀದರ್ನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳವಳಕಾರಿಯಾಗಿದೆ. ಲಂಚಬಾಕ ಸರ್ಕಾರದಿಂದಾಗಿ ಗುತ್ತಿಗೆದಾರರು, ಪೊಲೀಸ್ ಅಧಿಕಾರಿಗಳು, ಸರ್ಕಾರಿ ನೌಕರರು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.
ಕಾಂಗ್ರೆಸ್ ಭ್ರಷ್ಟಚಾರಕ್ಕೆ ಮತ್ತೊಬ್ಬ ಗುತ್ತಿಗೆದಾರ ಬಲಿ !
ಕಾಂಗ್ರೆಸ್ ಸಚಿವ @PriyankKharge ಆಪ್ತರು ಕಮಿಷನ್ ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣ ಬೀದರ್ನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳವಳಕಾರಿಯಾಗಿದೆ. ಲಂಚಬಾಕ ಸರ್ಕಾರದಿಂದಾಗಿ ಗುತ್ತಿಗೆದಾರರು, ಪೊಲೀಸ್ ಅಧಿಕಾರಿಗಳು, ಸರ್ಕಾರಿ ನೌಕರರು ಜೀವ… pic.twitter.com/Bhxwnb6mYp
— BJP Karnataka (@BJP4Karnataka) December 26, 2024
ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಪ್ರಿಯಾಂಕ್ ಖರ್ಗೆಯ ಆಪ್ತ, ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ಸೇರಿದಂತೆ 8 ಜನರ ಮೇಲೆ ಗಂಭೀರ ಆರೋಪ ಹೊರಿಸಿ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದಿರುವ ಬಿಜೆಪಿ, ಸಚಿವರ ಆಪ್ತರೊಬ್ಬರು ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಡುತ್ತಾರೆ ಎಂದಾದರೆ ಖಂಡಿತವಾಗಿಯೂ ಇಲ್ಲಿ ಸಚಿವರ ಕೈವಾಡ ಇದ್ದೇ ಇರುತ್ತದೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಪ್ರತಿಪಾದಿಸಿದೆ.