ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅಡುಗೆ ಅನಿಲ ದರವನ್ನು ಮತ್ತೊಮ್ಮೆ ಇಳಿಕೆ ಮಾಡಿದೆ. ಈ ಮೂಲಕ ಸತತ ನಾಲ್ಕನೇ ಬಾರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.
ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಇಳಿಕೆ ಮಾಡಿದ್ದು, ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.







































































