ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾನುವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 4553 ಪಾಸಿಟಿವ್ ಕೇಸ್ಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,15,155ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲೇ ಭಾನುವಾರ ಸಂಜೆಯ ಹೊತ್ತಿಗೆ 2787 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,47,031ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಶನಿವಾರ ಸಂಜೆಯಿಂದ ಭಾನುವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,625ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.