ದೆಹಲಿ: ಇದೀಗ ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ ಬುಧವಾರದ ಅಂಕಿ ಅಂಶಗಳ ಪ್ರಕಾರ ಒಂದೇ ದಿನ 2,00,739 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಕಿನಲ್ಲಾಗುತ್ತಿರುವ ಹೆಚ್ಚಳದ ಪ್ರಮಾಣವು ಆತಂಕ ಸೃಷ್ಟಿಸಿದೆ.
ಇದೇ ವೇಳೆ, ಬುಧವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಅಂಕಿಅಂಶ ಪೇರಿಸಿದೆ.
ಇಂದು ಬೆಳಿಗ್ಗೆ ಬಹಿರಂಗವಾದ ವರದಿ ಪ್ರಕಾರ ಬುಧವಾರ ಒಂದೇ ದಿನ 1,038 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ನಡುವೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಈ ಬೆಳವಣಿಗೆ ಆತಂಕವನ್ನು ಹೆಚ್ಚಿಸಿದೆ.