ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಕೃಷಿಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅಭಯಹಸ್ತ ನೀಡಿದ್ದಾರೆ.
ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.
ಬಡತನರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಕೋವಿಡ್ ಚಿಕಿತ್ಸೆಗೆ ಹಾವೇರಿ ಜಿಲ್ಲೆಗೊಳಪಟ್ಟ ಆಸ್ಪತ್ರೆಗಳಿಗೆ ಮಾತ್ರ ದಾಖಲಾಗಿಬೇಕು.ಹಾಗೂ ಬಿಪಿಎಲ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ಚಿಕಿತ್ಸೆ ಪಡೆದ ವಿವರ ಮಾಹಿತಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಮನೋಜ್ ಹಾರನಹಳ್ಳಿ ಹಾಗೂ ನಾಗರಾಜ್ ಬಣಕಾರ್ ಅವರನ್ನು ಸಂಪರ್ಕಿಸಬಹುದಾಗಿದೆ.