ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ಆದರೆ ಸೋಂಕಿನ ವೇಗದ ಪ್ರಮಾಣ ತಗ್ಗಿದೆ. ವಿವಿಧ ರಾಜ್ಯಗಳಲ್ಲಿ ಬುಧವಾರ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಮಂಗಳವಾರ ಒಂದೇ ದಿನ 50,848 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 3,00,28,709ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಒಂದೇ ದಿನದಲ್ಲಿ 1,358 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.







































































