ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಇಂದಿನ ಪಾಸಿಟಿವ್ ಕೇಸ್‌ಗಳು ಹಾಗೂ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆಗಳು ಆತಂಕಕಾರಿ ಪ್ರಮಾಣದಲ್ಲಿವೆ.
ಶುಕ್ರವಾರ ಸಂಜೆಯ ಹೊತ್ತಿಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಪ್ರಕಾರ 7,955 ಹೊಸ ಪ್ರಕರಣಗಳು ವರದಿಯಾಗಿವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 10,48,085ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲೇ ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯ ನಡುವೆ 5,576 ಮಂದಿಯಲ್ಲಿ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,70,0014ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 46 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,813ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.
ಇಂದಿನ 09/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/wpXo0cIeNa @mla_sudhakar @PriyankKharge @BelladArvind @kiranshaw @WFRising @BangaloreBuzz @RCBTweets @NammaKarnataka_@ADinfodeptBIDAR @MangaloreCity pic.twitter.com/pWAd2fdJnH
— K'taka Health Dept (@DHFWKA) April 9, 2021