ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಡುತ್ತಿದೆ.
ಶುಕ್ರವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು 4991 ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,06,229ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲೇ ಶುಕ್ರವಾರ ಸಂಜೆಯ ಹೊತ್ತಿಗೆ 3509 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,41,242ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,591ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.