ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಶುಕ್ರವಾರ ಸಂಜೆಯ ಹೆಲ್ತ್ ಬುಲೆಟಿನ್ ಪ್ರಕಾರ ಪಾಸಿಟಿವ್ ಕೇಸ್ಗಳು ಹಾಗೂ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆಗಳನ್ನು ಗಮನಿಸಿದರೆ ಕರುನಾಡು ಇನ್ನೂ ಕೂಡಾ ಗಂಡಾಂತರದಿಂದ ಪಾರಾಗಿಲ್ಲ ಎಂಬುದನ್ನು ಸೂಚಿಸುತ್ತಿದೆ.
ಶುಕ್ರವಾರ ಸಂಜೆಯ ಹೊತ್ತಿಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 16,068 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲೇ ಹೊಸದಾಗಿ 3,221 ಮಂದಿಯಲ್ಲಿ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,77,496ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಇದೇ ಹೆಲ್ತ್ ಬುಲೆಟಿನ್ ವರದಿ ಪ್ರಕಾರ ಒಂದೇ ದಿನ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 364 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 30,895ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲೇ 206 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.