ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕುವತಡೆಯುವ ನಿಟ್ಟಿನಲ್ಲಿ ರಾಜ್ಯದಕ್ಲಿ ಟಫ್ ರೂಲ್ ಜಾರಿಗೆ ತರಲು ಬಿಎಸ್‌ವೈ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ ನಡೆದ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಚರ್ಚಿಸಲಾಯಿತು.
ಮುಂದಿನ 15 ದಿನಗಳ ಕಾಲ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ ಎಂದರು. ಎರಡು ವಾರ ಕಾಲ ರಾಜ್ಯದಲ್ಲಿ ಯಾವುದೇ ಪ್ರತಿಭಟನೆಗಳನ್ನು ನಡೆಸುವಂತಿಲ್ಲ, ಬೇಕಾಬಿಟ್ಟಿ ಪಾರ್ಟಿಗಳನ್ನು ನಡೆಸುವಂತಿಲ್ಲ. ನಿಯಮ ಮೀರಿ ಜಾತ್ರೆ ಉತ್ಸವಗಳಿಗೂ ಅವಕಾಶ ವಿಲ್ಲ. ಮಾಸ್ಕ್ ಕಡ್ಡಯದ ನಿಯಮ ಬಿಗಿಗೊಳಿಸಲು ಸಿಎಂ ಯಡಿಯೂರಪ್ಪ ಸೂಚಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ತೀರ್ಮಾನಗಳ ಕುರಿತಂತೆ ಮಾಹಿತಿ ಹಂಚಿಕೊಂಡ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ. ನೈಟ್ ಕರ್ಫ್ಯೂ ಕೂಡಾ ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ 15 ದಿನಗಳ ಕಾಲ ಯಾವುದೇ ಸತ್ಯಾಗ್ರಹ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಸಿಎಂ ತಿಳಿಸಿದರು.