ಬೆಂಗಳೂರು: ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದ್ದು ಸೋಂಕು ನಿಯಂತ್ರಿಸಲು ಸರ್ಕಾರ ಇಟ್ಟಿರುವ ಹೆಜ್ಜೆ ಫಲಕೊಡುತ್ತಿದೆ ಎಂಬುದು ಅನೇಕರ ಅಭಿಪ್ರಾಯ. ಈ ವರೆಗಿನ ನೈಟ್ ಕರ್ಫ್ಯೂ ಹಾಗೂ ವೀಜೆಂಡ್ ಕರ್ಫ್ಯೂ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 4 ರವರೆಗೆ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಸ್ತರಣೆಗೆ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಇಂದು ಸಂಪುಟದಲ್ಲಿ ಚರ್ಚಿಸಿ ಬಳಿಕವಷ್ಟೇ ತೀರ್ಮಾನ ಪ್ರಕಟಿಸಲು ಸರ್ಕಾರ ನಿರ್ಧರಿಸಿದೆ.
ಈ ನಿರಂತರ ಕೊರೋನಾ ಕರ್ಫ್ಯೂ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಮಳಿಗೆಗಳು ಹಾಗೂ ಅಗತ್ಯ ಸೇವೆಗಳ ಹೊರತಾಗಿ ಬೇರೆ ವಹಿವಾಟುಗಳಿಗೆ ಅವಕಾಶ ನೀಡದಿರಲು ಸರ್ಕಾರ ಮುಂದಾಗಿದೆ. ಈ ಬಾರಿಯೂ ಕರ್ಫ್ಯೂ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗೆ ಪೊಲೀಸರು ಕೂಡಾ ಸರ್ವ ಸನ್ನದ್ದರಾಗಿದ್ದಾರೆ.