ದೆಹಲಿ: ಅನೇಕ ತಿಂಗಳುಗಳು ಕಳೆದರೂ, ಜಾಗೃತಿ ಕಹಳೆ ಮೊಳಗುತ್ತಿದ್ದರೂ ಕೊರೋನಾ ಸೋಂಕಿನಿಂದ ಉಡೂರ ಉಳಿಯುವಲ್ಲಿ ದೇಶ ಸಫಲವಾಗುತ್ತಿಲ್ಲ. ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆ ವರೆಗೆ 24 ತಾಸುಗಳಲ್ಲಿ 63,489 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.
ದಿನೇದಿನೇ ಸೋಂಕಿನ ಪ್ರಮಾಣ ಏರುತ್ತಲೇ ಇದ್ದು ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಹಿರಂಗಪಡಿಸಿದೆ, ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆ ವರೆಗೆ ಒಂದೇ ದಿನ 944 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೊರೋನಾ ಸೋಂಕಿನಿಂದಾಗಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕೂಡ 49,980ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಮಾಡಿದೆ.