ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ ಭಾನುವಾರ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಶನಿವಾರ ಒಂದೇ ದಿನ 3,92,488 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸೋಕಿನಲ್ಲಾಗುತ್ತಿರುವ ಹೆಚ್ಚಳದ ಈ ಪ್ರಮಾಣವು ಆತಂಕ ಸೃಷ್ಟಿಸಿದೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ಒಂದೇ ದಿನ 3,680ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶ ಪೇರಿಸಿದೆ.
ಇಂದು ಬೆಳಿಗ್ಗೆ ಬಹಿರಂಗವಾದ ವರದಿ ಪ್ರಕಾರ ಶುಕ್ರವಾರ ಒಂದೇ ದಿನ 3,689 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ 2,15,542 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ನಡುವೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಈ ಬೆಳವಣಿಗೆ ಆತಂಕವನ್ನು ಹೆಚ್ಚಿಸಿದೆ.