ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ವೇಗ ಹೆಚ್ಚಿದ್ದು ಶನಿವಾರ ಬರೋಬ್ಬರಿ 9,746 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆವರೆಗಿನ ಅಂಕಿ ಅಂಶಗಳನ್ನೊಳಗೊಂಡ ಹೆಲ್ತ್ ಬುಲೆಟಿನ್ ಈ ಸಂಗತಿಯನ್ನು ಅನಾವರಣ ಮಾಡಿದೆ. ಆರೋಗ್ಯ ಇಲಾಖೆಯ ಈ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3093 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು 9746 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈ ನಡುವೆ ರಾಜ್ಯದಲ್ಲಿ ಶನಿವಾರ 128 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6298ಕ್ಕೆ ಏರಿಕೆಯಾಗಿದೆ.