ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಲೇ ಇದೆ. ಮೇ 15ರ ವರೆಗೆ ಇದು ಉನ್ನತ ಸ್ಥಿತಿಗೆ ತಲುಪುತ್ತೆ ಎಂಬ ಆತಂಕ ತಜ್ಞರದ್ದು.
ಗದಗ್: ಕೊರೋನಾ ಎರಡನೇ ಅಲೇ ಮೇ 15ರ ವರೆಗೆ ಉನ್ನತ ಸ್ಥಿತಿಗೆ ತಲುಪುತ್ತೆ ಅಂತ ತಜ್ಞರು ಆತಂಕ ಹೊರಹಾಕಿದ್ದಾರೆ.
ಈಗಾಗಲೇ ಕೊರೋನಾ ಸೋಂಕಿನ ಸಂಖ್ಯೆಗಳು ಹೆಚ್ಚುತ್ತಲೇ ಇದ್ದು ಎಲ್ಲೆಲ್ಲೂ ತಲ್ಲಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಎಚ್ಚರಿಕೆಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.
ಗದಗ್ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಸಚಿವರು ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕೊರೊನಾ ಎದುರಿಸಲು ತಯಾರಿ ಹೇಗಿರಬೇಕು ಅಂತ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆಕ್ಸಿಜನ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದ ಸಚಿವರು, ತಾಲೂೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಇದೆ. ಹೀಗಾಗಿ ಸಣ್ಣ ಕೈಗಾರಿಕೋದ್ಯಮಿಗಳ ನೆರವಿನೊಂದಿಗೆ ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ರೆಮ್ ಡಿಸಿವಿರ್ ಲಭ್ಯವಿದೆ ಎಂದ ಅವರು, ಕೊರೊನಾ ನಿಯಂತ್ರಣದಲ್ಲಿ ಗದಗ ಎರಡನೇ ಸ್ಥಾನದಲ್ಲಿದೆ. ಜಿಮ್ಸ್ ಆಸ್ಪತ್ರೆಯಲ್ಲಿ 300 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಿ ಸಿ ಪಾಟೀಲ್ ಹೇಳಿದ್ದರು.