ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಲ್ಲಣ ಸೃಷ್ಟಿಸಿದ್ದು, ಪರಿಸ್ಥಿತಿ ನಿಭಾಯಿಸುವ ಸಂಬಂಧ ಸರ್ಕಾರ ಕಸರತ್ತು ನಡೆಸುತ್ತಿದೆ.
ಸೋಂಕು ನಿಯಂತ್ರಣ ಸಂಬಂಧ ಸಿಎಂ ಯಡಿಯೂರಪ್ಪ ಅವರು ಮಂಗಳವಾರ ಸಂಜೆ ವಿಧಾನ ಮಂಡಲದ ಉಭಯ ಸದನಗಳ ಮುಖಂಡರ ಸಭೆ ಕರೆದಿದ್ದಾರೆ. ಸಂಜೆ 4.30ಕ್ಕೆ ವೀಡಿಯೋ ಸಂವಾದ ಮೂಲಕ ಅಭಿಪ್ರಾಯ ಸಂಗ್ರಹಿಸಲಿದ್ದು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಈ ವರ್ಚುವಲ್ ಮೀಟಿಂಗ್ ನಡೆಯಲಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳು ತಿಳಿಸಿವೆ.