ಚಿಕ್ಕಬಳ್ಳಾಪುರ: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ, ರಾಜ್ಯದ ಗಡಿಭಾಗಗಳಲ್ಲಿ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯ ಉದ್ಘಾಟಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಇನ್ನಷ್ಟು ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ನೀಡುತ್ತಿದ್ದಾರೆ. ಇದನ್ನು ಸದುಪಯೋಪಡಿಸಿಕೊಳ್ಳಬೇಕು. ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.
ಜಾತಿ ಮೀಸಲು ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯಗಳು ಮತ್ತು ಬೇಡಿಕೆಗಳು ಇವೆಲ್ಲವನ್ನೂ ಸಮತೋಲನದಿಂದ ವೈಜಾನಿಕವಾಗಿ ಪರಾಮರ್ಶಿಸಿ, ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿಒಂದು ಅಂತಿಮ ರೂಪ ನೀಡುವುದು ನಮ್ಮ ಸರ್ಕಾರದ ಉದ್ದೇಶ, ಎಂದರು.