ಬೆಂಗಳೂರು: ಕೇರಳದಲ್ಲಿ ಕೊರೋನಾ ಸೋಂಕು ಶರವೇಗದಲ್ಲಿ ಹಬ್ಬುತ್ತಿದ್ದು,ಆ ರಾಜ್ಯಕ್ಕೆ ಹೊಂದಿಕೊಂಡಂತಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಆತಂಕ ಮನೆಮಾಡಿದೆ.
ಕೇರಳದಿಂದ ರಾಜ್ಯಕ್ಕಾಗಮಿಸುವ ಮಂದಿಗೆ ಕೊರೋನಾ ಪರಿಕ್ಷಾ ವರದಿ ಕಡ್ಡಾಯವಾಗಿದ್ದು, ನೆಗೆಟಿವ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದೀಗ ಮತ್ತೊಂದು ಕಠಿಣ ನಿಯಮ ಜಾರಿಗೆ ಸರ್ಕಾರ ಮುಂದಾಗಿದೆ.
ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಕೇರಳದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
ಒಂದು ವೇಳೆ, ಒಂದು ದಿನದ ಮಟ್ಟಿಗೆ ಕೇರಳಕ್ಕೆ ತೆರಳುವವರೂ ಈ ಫಜೀತಿಯಲ್ಲಿ ಸಿಲುಕುವ ಸಾಧ್ಯತೆಗಳೇ ಹೆಚ್ಚು. ದಕ್ಷಿಣಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕೇರಳವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಪೊಲೀಸರು ತೀವ್ತ ನಿಗಾ ವಹಿಸಿದ್ದಾರೆ