ಬೆಂಗಳೂರು: ರಾಜ್ಯದಲ್ಲಿ ಜನರನ್ನು ಕೊರೋನಾ ಹಾವಳಿಯಿಂದ ರಕ್ಷಿಸಲು ಸರ್ಕಾರ ಯಾವ ಕ್ರಮಕೈಗೊಂಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಕೋವಿಡ್ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್ ಸಭೆಗಳನ್ನು ಮಾಡಿದೆ, ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಸರ್ಕಾರ ಮಾತಾಡಬೇಕು ಎಂದು ಹೇಳಿದ್ದಾರೆ.
ಕೋವಿಡ್ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್ ಸಭೆಗಳನ್ನು ಮಾಡಿದೆ, ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಸರ್ಕಾರ ಮಾತಾಡಬೇಕು.
1/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2021
ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ? ಎಂದವರು ಪ್ರಶ್ನಿಸಿದ್ದಾರೆ.
ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ?
2/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2021
ಕೋವಿಡ್ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈ ವರೆಗೆ ಏನು ಮಾಡಿಕೊಂಡಿತ್ತು? ಕೋವಿಡ್ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದ ವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನಾಗಿದ್ದವು? ರಂದು ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ.
ಕೋವಿಡ್ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈ ವರೆಗೆ ಏನು ಮಾಡಿಕೊಂಡಿತ್ತು? ಕೋವಿಡ್ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದ ವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನಾಗಿದ್ದವು?
3/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2021
ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನು ಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ? ಎಂದಿರುವ ಅವರು, ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್ಡಿಸಿವಿರ್ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇದನ್ನು ಮೊದಲು ಹೇಳಲಿ ಎಂದುು ಸರ್ಕಾರವನ್ನು ತರಾಟೆಗ ತೆಗೆದುಕೊಂಡಿದ್ದಾರೆ.
ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್ಡಿಸಿವಿರ್ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇದನ್ನು ಮೊದಲು ಹೇಳಲಿ.
5/7— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2021