ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಮತ್ತೆ ಹೊಸದಾಗಿ 2,298 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸದಾಗಿ 2,298 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲೇ ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದು, ಬುಧವಾರ 1,398 ಮಂದಿಯಲ್ಲಿ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಮಂಗಳವಾರ ಸಂಜೆ ನಂತರ ಬುಧವಾರ ಸಂಜೆಯ ನಡುವಿನ ಅವಧಿಯಲ್ಲಿ ಕೊವಿಡ್ ಸೋಂಕಿಗೊಳಗಾಗಿ ರಾಜ್ಯದಲ್ಲಿ ಕೊರೋನಾ 12 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,461ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಹೇಳಲಾಗಿದೆ.