ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ ಭಾನುವಾರ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಶನಿವಾರ ಒಂದೇ ದಿನ 2,40,842 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿನ ಸೋಂಕಿತರ ಸಂಖ್ಯೆ 2,65,30,132ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ಒಂದೇ ದಿನ ಸುಮಾರು 3,741 ಮಂದಿ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶ ಪೇರಿಸಿದೆ. ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 2,95,525ಕ್ಕೆ ಏರಿಕೆಯಾಗಿದೆ.