ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ದೃಢಪಡುತ್ತಿದ್ದು ಈ ಸೋಂಕಿನ ಪ್ರಮಾಣ ಕಳೆದೆರಡು ತಿಂಗಳಲ್ಲಿ 6 ಪಟ್ಟು ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
ಶನಿವಾರ ಕೂಡಾ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 4373 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,10,602ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲೇ ಶನಿವಾರ ಸಂಜೆಯ ಹೊತ್ತಿಗೆ 3,002 ಮಂದಿಗೆ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,44,244ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆಯ ನಡುವೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,610ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯು ಹೆಲ್ತ್ ಬುಲೆಟಿನ್ ಮೂಲಕ ಮಾಹಿತಿ ನೀಡಿದೆ.
ಕಳೆದ 2 ತಿಂಗಳಿನಲ್ಲಿ ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ.
ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ.
ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ.
1/2 pic.twitter.com/SOLBD6vdG2
— Dr Sudhakar K (Modi ka Parivar) (@DrSudhakar_) April 3, 2021
ಕಳೆದ 2 ತಿಂಗಳಿನಲ್ಲಿ ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.