ಬೆಂಗಳೂರು: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 14 ದಿನಗಳ ಕಾಲ ಕಠಿಣ ನಿಯಮಗಳನ್ನು ಜಾತಿಗೊಳಿಸಿದೆ. ಈ ಅವಧಿಯಲ್ಲಿ ಏನಿರುತ್ತೆ? ಏನಿರಲ್ಲ ಎಂಬ ಬಗ್ಗೆ ಜನರಲ್ಲಿ ಗೊಂದಲ ಉಂಟಾಗಿದೆ. ಸೋಮವಾರ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ನಿಯಮಗಳನ್ನು ಸ್ಪಷ್ಟಪಡಿಸಲಾಗಿದೆ. ಸೊಂಕಿನ ಸಂಕೋಲೆಯನ್ನು ಕಡಿಯಲು ಟಫ್ ರೂಲ್ ಜಾರಿಮಾಡಲಾಗಿದೆ ಎಂದು ಮಾರ್ಗ ಸೂಚಿಯಲ್ಲಿ ಹೇಳಲಾಗಿದೆ.
ಅಗತ್ಯ ವಸ್ತುಗಳ ಮಾರಾಟಕ್ಕೆ ಸೀಮಿತ ಅವಧಿಯನ್ನು ನಿಗದಿಪಡಿಸಲಾಗಿದೆ. ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯಸೇವೆಯ ಅಂಗಡಿಗಳು ತೆರೆಯಬಹುದು. ದಿನಸಿ, ಹಣ್ಣು ತರಕಾರಿ, ಮೀನು ಮಾಂಸ ಅಂಗಡಿ ತೆರೆಯಲು ಅವಕಾಶವಿದೆ.
ಮದ್ಯಂದಗಡಿಗಳಿಗೂ ಇದೇ ಅವಧಿ.
ಹೋಟೆಲ್ ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ. ಬ್ಯಾಂಕ್, ಇ-ಕಾಮರ್ಸ್ ಸೇವೆಗಳು ಅಬಾಧಿತ.
ಇನ್ನುಳಿದಂತೆ ಏನಿರುತ್ತೆ? ಏನಿರಲ್ಲ..?
ಏರ್‌ಪೋರ್ಟ್ ಬಸ್, ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವವರು ಟಿಕೆಟ್ ತೋರಿಸುವುದು ಕಡ್ಡಾಯ.
ತುರ್ತು ಸೇವೆಗೆ ಮಾತ್ರ ಆಟೋ, ಟ್ಯಾಕ್ಸಿ ಬಳಸಬಹುದು. ಮೆಟ್ರೋ ಸಂಚಾರ ಸಂಪೂರ್ಣ ಬಂದ್.
ಅಂತಾರಾಜ್ಯವಾಹನ ಸಂಚಾರಕ್ಕೆ ನಿರ್ಬಂಧ.
ಅಂತರ್ ಜಿಲ್ಲಾ ಸಂಚಾರ ತುರ್ತು ಸೇವೆಗೆ ಮಾತ್ರ.
ಎಲ್ಲ ಶಾಲಾ ಕಾಲೇಜುಗಳು ಬಂದ್.
ಸಿನಿಮಾ ಹಾಲ್,ಶಾಪಿಂಗ್ ಮಾಲ್, ಜಿಮ್, ಯೋಗ ಕೇಂದ್ರ, ಸಮುದಾಯ ಭವನಗಳು ಬಂದ್.
ಸ್ಟೇಡಿಯಂ, ಆಟದ ಮೈದಾನ, ಕ್ರೀಡಾ ಸಂಕೀರ್ಣ ಬಂದ್.
ಸಮಾರಂಭ, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ..
ಮದುವೆ ಕಾರ್ಯಕ್ರಮದಲ್ಲಿ 50 ಜನರು ಮಾತ್ರ ಪಾಲ್ಗೊಳ್ಳಬಹುದು.
ಅಂತ್ಯಕ್ರಿಯೆಯಲ್ಲಿ ಐವರು ಮಾತ್ರ ಭಾಗಿಗೆ ಅವಕಾಶ.
ಸಾಮಾಜಿಕ, ಧಾರ್ಮಿಕ, ಕ್ರೀಡಾ ಮನರಂಜನಾ, ಸಾಂಸ್ಕೃತಿಕ, ರಾಜಕೀಯ ಚಟುವಟಿಕೆಗೆ ನಿರ್ಬಂಧ
ಮಂದಿರ, ಮಸೀದಿ, ಚರ್ಚ್‌ಗಳಿಗೆ ಸಾರ್ವಜನಿಕರಿಗೆ ಪ್ರವೇಶ ಅವಕಾಶವಿಲ್ಲ. ಅರ್ಚಕರಷ್ಟೇ ಪೂಜೆ ಮಾಡಬಹುದು.
ಯಾವುದಕ್ಕೆ ನಿರ್ಬಂಧವಿಲ್ಲ…?
ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ನಿರ್ಬಂಧವಿಲ್ಲ
ಕೈಗಾರಿಕೆಗಳಲ್ಲಿ ಕೆಲಸಕ್ಕೆ ತೆರಳುವವರು ಐಡಿ ಕಾರ್ಡ್ ತೋರಿಸಬೇಕು
ನ್ಯಾಯಬೆಲೆ ಅಂಗಡಿ, ಆಹಾರ, ದಿನಸಿ, ಹಣ್ಣು ತರಕಾರಿ, ಡೇರಿ, ಹಾಲಿನ ಬೂತ್, ಮೀನು, ಮಾಂಸ ಮಾರಾಟಕ್ಕೆ ಅಡ್ಡಿ ಇಲ್ಲ.
ಸರ್ಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಸಾಮಾನ್ಯ ಕೆಲಸಕ್ಕೆ ಹಾಜರಾಗುವುದು. ಉಳಿದ 50ರಷ್ಟು ಸಿಬ್ಬಂದಿ ಕೋವಿಡ್ ಡ್ಯೂಟಿಗೆ ಹಾಜರಾಗಬೇಕು.
ಆರೋಗ್ಯ ವೈದ್ಯಕೀಯ ಶಿಕ್ಷಣ, ಕಂದಾಯ, ಗೃಹ ಇಲಾಖೆ, ಅಗ್ನಿಶಾಮಕ ದಳ, ಕಾರಾಗೃಹ, ವಿಪತ್ತು ನಿರ್ವಹಣಾ ಸಿಬ್ಬಂದಿ, ಎಲ್ಲಾ ಡಿಸಿಗಳ ಕಚೇರಿ, ಬಿಬಿಎಂಪಿ ಸಿಬ್ಬಂದಿ ಕೆಲಸಕ್ಕೆ ನಿರ್ಬಂದವಿಲ್ಲ.