ಬೆಂಗಳೂರು: ಕೊರೋನಾ ಸೋಂಕು ಉಲ್ಬಣವಾಗುತ್ತಿದ್ದು ವೈರಾಣು ಪ್ರಸರಣ ತಡೆಗೆ ಸರ್ಕಾರ ಕಠಿಣ ನಿಯಮಾವಳಿ ಜಾರಿಗೆ ತಂದಿದೆ. ಇದರ ಜೊತೆಯಲ್ಲೇ ಸರ್ವರಿಗೂ ಕೊರೋನಾ ನಿರೋಧಕ ಲಸಿಕೆ ವಿತರಣೆಯ ಭರವಸೆಯನ್ನು ಸರ್ಕಾರ ನೀಡಿದ್ದು ಇದೀಗ ಅಭಿಯಾನ ಯಶಸ್ವಿ ಬಗ್ಗೆ ಸರ್ಕಾರಕ್ಕೇ ಅನುಮಾನ ಮೂಡಿದಂತಿದೆ ಎಂದು ಪ್ರತಿಪಕ್ಷಗಳು ದೂರಿವೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದಿದ್ದಾರೆ.
ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ.
1/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021
ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದು ಟೀಕಿಸಿದ್ದಾರೆ.
ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ.
2/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021
18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಜನತೆ ಎಂದಿಗೂ ಕ್ಷಮಿಸರು ಎಂದು ಹೆಚ್ಡಿಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು.
3/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021
ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು. “ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ” ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು. "ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ" ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು?
4/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021
ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ ಎಂದು ಒತ್ತಾಯಿಸಿದ್ದಾರೆ.
ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ.
5/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021
18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ ಎಂದು ವಿಶ್ಲೇಷಿಸಿದ್ದಾರೆ.
18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ.
6/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021
ದೇಶದಾದ್ಯಂತ ಕೊರೋನಾ ಸೋಂಕಿತರು ಬೆಡ್, ಆಕ್ಸಿಜನ್, ಅಂಬುಲೆನ್ಸ್, ಔಷಧಿಗಳಿಲ್ಲದೆ ಪರದಾಡುತ್ತಿದ್ದಾರೆ. ಸತ್ತವರ ಅಂತ್ಯಸಂಸ್ಕಾರಕ್ಕೂ ಪಾಳಿಯಲ್ಲಿ ನಿಲ್ಲಬೇಕಾದ ವ್ಯವಸ್ಥೆ ಸೃಷ್ಟಿಸಿದ ಕೇಂದ್ರ- ರಾಜ್ಯ ಸರ್ಕಾರಗಳ ದಯನೀಯ ವೈಫಲ್ಯದ ಬಗ್ಗೆ ದೇಶದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದಿರುವ ಅವರು, ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು ಎಂದು ಸಲಹೆ ಮಾಡಿದ್ದಾರೆ.
ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು.
8/10— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2021