ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಿಕ್ಷಣ ಸಂಸ್ಥೆಯಲ್ಲಿ ಅನೇಕ ಮಕ್ಕಳಿಗೆ ಕೊರೋನಾ ಸೋಂಕು ಹರಡಿದೆ ಎಂಬ ಸುದ್ದಿ ಕೇಳಿ ಬಂದಿರುವಾಗಲೇ ಅತ್ತ ಧಾರವಾಡದಲ್ಲಿನ ಚಿತ್ರಣ ಆತಂಕದ ಅಲೆ ಎಬ್ಬಿಸಿದೆ.
ಧಾರವಾಡದ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆಯಾಗಿದೆ.
ಧಾರವಾಡದ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಮತ್ತೆ 66 ಪ್ರಕರಣ ಸೇರಿ ಈವರೆಗೆ ಒಟ್ಟು 182 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಸಂಜೆಯವರೆಗೆ ಮತ್ತೆ ಎಸ್ ಡಿ ಎಂ ಕ್ಯಾಂಪಸ್‌ನ ಸುಮಾರು 690 ಜನರನ್ನು ಆರ್ಟಿಪಿಸಿಆರ್ ಸಹಿತ ವಿವಿಧ ತಪಾಸಣೆಗೆ ಒಳಪಡಿಸಲಾಗಿದೆ. ಆ ವೇಳೆ ಹಲವರಲ್ಲಿ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.