ಬೆಳಗಾವಿ: ಭ್ರಷ್ಟಾಚಾರ ವಿರುದ್ಧ ಖಡಕ್ ಮಾತುಗಳನ್ನಾಡುತ್ತಿರುವ ಸಚಿವ ಕೃಷ್ಣಬೈರೇಗೌಡ ಅವರ ಇಲಾಖೆಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಬಗ್ಗೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ, ಈ ವಿಷಯ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ.
ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಕಂದಾಯ ಕೃಷ್ಣಬೈರೇಗೌಡ ಕಂದಾಯ ಮತ್ತು ಭೂಮಾಪನ ಇಲಾಖೆಯಲ್ಲಿ ಕೆಳ ಹಂತದಲ್ಲಿ ಭ್ರಷ್ಟಾಚಾರ ನಡೆಯುಯತ್ತಿರುವುದು ನಿಜ ಒಪ್ಪಿಕೊಂಡಿದ್ದಾರೆ.
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಶಾಸಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿದ ಸಚಿವ ಕೃಷ್ಣಬೈರೇಗೌಡ, ಕೆಳಮಟ್ಟದಲ್ಲಿ ಭ್ರಷ್ಟಾಚಾರ ತಡೆಯುವುದು ಸುಲಭವಲ್ಲ. ಇದು ಹಿಂದೆಯೂ ಇತ್ತು ಮತ್ತು ಈಗಲೂ ಮುಂದುವರಿಯುತ್ತಿದೆ. ಆದರೆ ನಾವು ಅದನ್ನು ತಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದರು.
ಇದೇ ವೇಳೆ, ನಾನು ಅಕ್ರಮಗಳನ್ನು ತಡೆಯಲು ಬಂದಿದ್ದೇನೆಯೇ ಹೊರತು ಭ್ರಷ್ಟಾಚಾರವನ್ನು ಬೆಂಬಲಿಸಲು ಅಲ್ಲ’ ಎಂದು ಕೃಷ್ಣಬೈರೇಗೌಡ ಹೇಳಿದರು.