ಹುಬ್ಬಳ್ಳಿ: ಕರಸೇವಕರ ಬಂಧನ ವಿಚಾರ ರಾಜ್ಯ ರಾಜಕೀಯದಲ್ಲಿ ಜಟಾಪಟಿಗೆ ಕಾರಣವಾಗಿದ್ದು, ಮತ್ತೊಂದೆಡೆ ಬಂಧಿತ ಕರಸೇವಕ ಶ್ರೀಕಾಂತ ಪೂಜಾರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಡಿಸೆಂಬರ್ 29ರಂದು ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಹುಬ್ಬಳ್ಳಿಯ ನ್ಯಾಯಾಲಯ ಇಂದು (ಶುಕ್ರವಾರ) ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. .







































































