ಬೆಂಗಳೂರು: ಸನಾತನ ಧರ್ಮ ಕುರಿತ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪ ಹಿನ್ನೆಲೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಮಿನಲ್ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ನಾಲ್ವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.
2023ರ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯು, ಮಲೇರಿಯಾ ಹಾಗೂ ಕೊರೊನಾಕ್ಕೆ ಹೋಲಿಕೆ ಮಾಡಿದ್ದರು. ನಾತನ ಧರ್ಮವನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಈ ಬಗ್ಗೆ ಪರಮೇಶ ಎಂಬವರು ದಾಖಲಿಸಿದ್ದ ಖಾಸಗಿ ದೂರು ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ.