ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.
ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಘೋಷಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ



















































