ಬೆಂಗಳೂರು: ಕೋವಿಡ್ ಸಂಕಟ ಕಾಲದಲ್ಲಿ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು ಎಂದು ನಳಿನ್ ಕುಮಾರ್ ಅವರು ಸರ್ಕಾರದ ಕಾರ್ಯಗಳನ್ನು ಮೆಚ್ಚಿಕೊಂಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್ ಸ್ಥಾಪಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು.
ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್ ಸ್ಥಾಪಿಸಿದ್ದಾರೆ.
4/4#NalinSpeaks
— BJP Karnataka (@BJP4Karnataka) May 16, 2021
ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೋನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ ಎಂದು ನಳಿನ್ ಹೇಳಿದ್ದಾರೆ.
ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೋನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ.
ಕಾಂಗ್ರೆಸ್ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ.
ಶ್ರೀ @nalinkateel
ಬಿಜೆಪಿ ರಾಜ್ಯಾಧ್ಯಕ್ಷರು1/4#NalinSpeaks
— BJP Karnataka (@BJP4Karnataka) May 16, 2021
ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ & ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಹಾಗೂ ನಿಭಾಯಿಸುತ್ತಿರುವ ವೈಖರಿ ಬಗ್ಗೆ ಹೇಳಿಕೊಂಡಿದ್ದಾರೆ.
ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ & ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ.
2/4#NalinSpeaks
— BJP Karnataka (@BJP4Karnataka) May 16, 2021
ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ. ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ.
ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ.
3/4#NalinSpeaks
— BJP Karnataka (@BJP4Karnataka) May 16, 2021