ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚುತ್ತಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇದರ ಪ್ರಮಾಣ ಹೆಚ್ಚಿದೆ. ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ದಕ್ಷಿಣ ಕನ್ಬಡ ಜಿಲ್ಲೆ ನಿಯಂತ್ರಣ ತಪ್ಪಿದೆ.
ನಿತ್ಯ ಆತಂಕಕಾರಿ ಸಂಖ್ಯೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗುತ್ತಿವೆ. ಇದೀಗ ದಕ್ಷಿಣ ಕನ್ಬಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.5ರಷ್ಟಿದೆ.
ದಕ್ಷಿಣ ಕನ್ನಡದಲ್ಲಿ ಜುಲೈ 3ನೇ ವಾರದಲ್ಲಿ ಪಾಸಿಟಿವಿಟಿ ದರ ಶೇ. 3.6ರಷ್ಟಿತ್ತು. ಇದೀದ ಶೇಕಡಾ 5ರ ಆಸುಪಾಸಿನಲ್ಲಿದೆ. ಕೇರಳ ಗಡಿ ಭಾಗದಲ್ಲಿ ಸೋಂಕು ಹೆಚ್ಚುತ್ತಿದೆ ಎನ್ನಲಾಗುತ್ತಿದೆ.