ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಸಂಜೆಯ ಹೆಲ್ತ್ ಬುಲೆಟಿನ್ ಪ್ರಕಾರ ಪಾಸಿಟಿವ್ ಕೇಸ್‌ಗಳು ಹಾಗೂ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆಗಳು ಆತಂಕಕಾರಿ ಪ್ರಮಾಣದಲ್ಲಿವೆ.
ಭಾನುವಾರ ಸಂಜೆಯ ಹೊತ್ತಿಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 47,930 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 19,34,378ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲೇ ಹೊಸದಾಗಿ 20,897 ಮಂದಿಯಲ್ಲಿ ಸೋಂಕು ದೃಢಪಟ್ಟಿರುವ ಮಾಹಿತಿ ಸಿಕ್ಕಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9,50,893ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಈ ನಡುವೆ, ಇದೇ ಹೆಲ್ತ್ ಬುಲೆಟಿನ್ ವರದಿ ಪ್ರಕಾರ ಒಂದೇ ದಿನ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 490 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 18,776ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲೇ 281 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.