ಬೆಂಗಳೂರು: ಗ್ರಾಮೀಣ ರೈತರು, ಅದರಲ್ಲೂ ಹಾಲು ಹಾಕಲು ಡೈರಿಗೆ ತೆರಳುವ ರೈತರು ಕೋವಿಡ್ ಸೋಂಕಿನ ಆತಂಕದಲ್ಲಿದ್ದಾರೆ. ಈ ಕುರಿತು ಸರ್ಕಾರದ ಗಮನಸೆಳೆದಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರ ಹಾಗೂ ಕೆಎಂಎಫ್ ಸೂಕ್ತ ಪರ್ಯಾಯ ಕ್ರಮವಹಿಸಬೇಕಿದೆ ಎಂದು ಸಲಹೆ ಮಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್ 19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ. ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ.
1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2021
ಈಗಲೇ ಜಾಗೃತಿ ಮೂಡಿಸದಿದ್ದರೆ ಹಳ್ಳಿಗಳಲ್ಲಿ ಸಾವುನೋವಿನ ಪ್ರಮಾಣ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಕೋವಿಡ್ ಸೋಂಕಿತರ ಮನೆಯ ರಾಸುಗಳಿಂದ ಕರೆದ ಹಾಲನ್ನು ಸೋಂಕಿತರೇ ನೇರವಾಗಿ ಡೈರಿಗೆ ತಂದು ಹಾಲು ಹಾಕುವುದು ಬೇಡ. ಸೋಂಕಿತರಲ್ಲದ ಮನೆಯ ಆರೋಗ್ಯವಂತ ಸದಸ್ಯರು ಹಾಲನ್ನು ತಂದುಹಾಕುವುದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದು ಎಂದು ಸಲಹೆ ಮಾಡಿದ್ದಾರೆ.
ಈಗಲೇ ಜಾಗೃತಿ ಮೂಡಿಸದಿದ್ದರೆ ಹಳ್ಳಿಗಳಲ್ಲಿ ಸಾವುನೋವಿನ ಪ್ರಮಾಣ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.
ಕೋವಿಡ್ ಸೋಂಕಿತರ ಮನೆಯ ರಾಸುಗಳಿಂದ ಕರೆದ ಹಾಲನ್ನು ಸೋಂಕಿತರೇ ನೇರವಾಗಿ ಡೈರಿಗೆ ತಂದು ಹಾಲು ಹಾಕುವುದು ಬೇಡ.
ಸೋಂಕಿತರಲ್ಲದ ಮನೆಯ ಆರೋಗ್ಯವಂತ ಸದಸ್ಯರು ಹಾಲನ್ನು ತಂದುಹಾಕುವುದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದು.
2/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2021
ಡೈರಿಗೆ ಹಾಲು ಹಾಕಲು ಬಂದವರು ಕಡ್ಡಾಯವಾಗಿ ಶುಚಿತ್ವ, ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಡೈರಿಗಳಲ್ಲಿ ಶುಚಿತ್ವ ಕಾಪಾಡುವುದರ ಜತೆಗೆ ಪರಸ್ಪರ ಅಂತರವನ್ನು ಕಾಯ್ದುಕೊಳ್ಳಬೇಕು ಎಂದಿರುವ ಅವರು, ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು ಎಂದಿದ್ದಾರೆ.
ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು.
4/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2021